ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ | ದಳಪತಿಗಳ ನಮನ tribute-to-shivakumar-swamiji
ಬೆಂಗಳೂರು : ಇಂದು ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ನಮನ ಸಲ್ಲಿಸಿದ್ದಾರೆ.
ಭಕ್ತರ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಲಿಂಗೈಕ್ಯ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಸ್ವಾಮೀಜಿಗಳ ಪುಣ್ಯಸ್ಮರಣೆಯಂದು ನನ್ನ ಭಕ್ತಿಪೂರ್ವಕ ನಮನಗಳು. ಶ್ರೀಗಳನ್ನು ಸ್ಮರಿಸುತ್ತಾ ಅವರು ಹಾಕಿಕೊಟ್ಟ ಸನ್ನಡತೆಯ ದಾರಿಯಲ್ಲಿ ಸಾಮರಸ್ಯದಿಂದ ಬಾಳಿ ಅವರ ಅನುಗ್ರಹಕ್ಕೆ ಭಾಜನರಾಗೋಣ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಟ್ವೀಟ್ ಮಾಡಿದ್ದಾರೆ.
ಅನ್ನ, ಆಶ್ರಯ, ಅಕ್ಷರದ ಮೂಲಕ ಕರ್ನಾಟಕದ ಕಲ್ಪವೃಕ್ಷವಾಗಿದ್ದ, ಜ್ಞಾನದಿವ್ಯತೆಯ ಸಾಕ್ಷಾತ್ಕಾರವಾಗಿದ್ದ ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾಸ್ವಾಮೀಜಿಗಳ ಪುಣ್ಯಸ್ಮರಣೆಯ ʼದಾಸೋಹ ದಿನʼವು ಹಸಿವುಮುಕ್ತ, ನಿರಾಶ್ರಯಮುಕ್ತ, ಅಜ್ಞಾನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಲಿ ಎಂದು ಹೆಚ್ ಡಿ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.







