(triple talaq)
ಉತ್ತರಾಖಂಡ್: ಸುಪ್ರೀಂ ಕೋರ್ಟ್ ನಲ್ಲಿ ತ್ರಿಪಲ್ ತಲಾಖ್ (triple talaq) ವಿರುದ್ಧ ಧ್ವನಿ ಎತ್ತಿದ್ದ ಶಯರಾ ಬನೋ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಉತ್ತರಖಾಂಡ್ ರಾಜ್ಯದ ಡೆಹರಾಡೂನ್ ನಗರದ ಬಿಜೆಪಿ ಅಧಿಕೃತ ಕಚೇರಿಯಲ್ಲಿ ಪಕ್ಷದ ಬಾವುಟ ಹಿಡಿದು ಕಮಲಪಡೆಗೆ ಸೇರ್ಪಡೆಗೊಂಡಿದ್ದಾರೆ.
ಉತ್ತರಾಖಂಡ ರಾಜ್ಯದ ಬಿಜೆಪಿ ಅಧ್ಯಕ್ಷ ಬಸೀಂಧರ್ ಭಗತ್ ಮತ್ತು ಸಂಘಟನಾ ಕಾರ್ಯದರ್ಶಿ ಅಜಯ್ ಕುಮಾರ್ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ.
ಬಿಜೆಪಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿರುವ ಶಯರಾ ಬನೋ, “ಪಕ್ಷ ನನ್ನನ್ನು ಎತ್ತರಕ್ಕೆ ಬೆಳೆಸಿದಲ್ಲಿ ಜನರನ್ನು ಬಿಜೆಪಿಯತ್ತ ಕರೆತರುವ ಕೆಲಸ ಮಾಡುತ್ತೇನೆ. ನನ್ನನ್ನು ಬಿಜೆಪಿಗೆ ಸೇರುವಂತೆ ಪ್ರೇರಿಪಿಸಿದ ವಿಚಾರಧಾರೆಗಳನ್ನು ಜನರಿಗೆ ತಿಳಿ ಹೇಳುತ್ತೇನೆ.
ವಿಶೇಷವಾಗಿ ಮುಸ್ಲಿಂ ಮಹಿಳೆಯರಿಗೆ ಬಿಜೆಪಿ ಪಕ್ಷದ ಸಿದ್ಧಾಂತಗಳ ಮನವರಿಕೆ ಮಾಡುವ ಕೆಲಸ ಮಾಡುತ್ತೇನೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡುತ್ತೇನೆ ” ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel