ಟ್ರಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ : 10 ಮಂದಿ ದುರ್ಮರಣ gujarat
ಗಾಂಧಿನಗರ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.
ಗುಜರಾತ್ ನ ಆನಂದ್ ಜಿಲ್ಲೆಯ ತಾರಪುರ್ ಹೆದಾರಿಯಲ್ಲಿ ಈ ದುರಂತ ನಡೆದಿದ್ದು, ಅಪಘಾತದಲ್ಲಿ ಮಗು ಸಹಿತ ಇಬ್ಬರು ಮಹಿಳೆಯರು ಹಾಗೂ 7 ಮಂದಿ ಪುರುಷರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನೆ ವಿಚಾರ ತಿಳಿಯುತ್ತಿದ್ದಂತೆಯೇ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಯರು ಅಲ್ಲಿನ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.










