ಟ್ರಕ್-ಸ್ವಿಫ್ ಕಾರ್ ಡಿಕ್ಕಿ : ಆರು ಮಂದಿ ಸಾವು madyapradesh saaksha tv
ಮಧ್ಯಪ್ರದೇಶ : ಸ್ವಿಫ್ ಕಾರಿಗೆ ಐಶರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿ ಪೈಕಿ ಆರು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದ ಬೇತುಲ್ ರಿಂಗ್ ರೋಡ್ ನಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ..
ಅಂದಹಾಗೆ ಕಾರಿನಲ್ಲಿದ್ದವರು ನಾಗಪುರದಿಂದ ಉಮ್ರೇತ್ ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.