ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಆತಂಕಕಾರಿ ಹೇಳಿಕೆ ನೀಡಿ ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಾರೆ.
ಇರಾನ್ ಜೊತೆಗಿನ ಅಣು ಒಪ್ಪಂದದ ಸಾಧ್ಯತೆಗಳು ಹಾಗೂ ಹೊಸ ಸಂಘರ್ಷದ ಭೀತಿಯ ಬಗ್ಗೆ ಮಾತನಾಡಿದ ಟ್ರಂಪ್, ನಮಗೆ ಬೇರೆ ದಾರಿಯಿಲ್ಲ. ಸಮಯ ವೇಗವಾಗಿ ಮುಗಿಯುತ್ತಿದೆ. ಗಡಿಯಾರ ಟಿಕ್ ಟಿಕ್ ಮಾಡಲು ಆರಂಭಿಸಿದೆ. ಕ್ಷಣಗಣನೆ ಆರಂಭವಾಗಿದೆ ಎಂದು ಹೇಳುವ ಮೂಲಕ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಟ್ರಂಪ್ ಅವರ ಈ ಹೇಳಿಕೆ ಜಾಗತಿಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಆತಂಕ ವ್ಯಕ್ತವಾಗಿದೆ.
ಇದಕ್ಕೆ ತಿರುಗೇಟು ನೀಡಿರುವ ಇರಾನ್, ಒಮಾನ್ ಕೊಲ್ಲಿ ಪ್ರದೇಶವೇ ಅಮೆರಿಕದ ಸ್ಮಶಾನವಾಗಬಹುದು ಎಂದು ಕಠಿಣ ಎಚ್ಚರಿಕೆ ನೀಡಿದೆ. ಎರಡೂ ರಾಷ್ಟ್ರಗಳ ನಡುವಿನ ಮಾತಿನ ಸಮರ ಇದೀಗ ಮತ್ತಷ್ಟು ತೀವ್ರವಾಗುತ್ತಿದ್ದು, ಜಾಗತಿಕ ಸಮುದಾಯ ಪರಿಸ್ಥಿತಿಯನ್ನು ಆತಂಕದಿಂದ ಗಮನಿಸುತ್ತಿದೆ.








