Russia vs ukraine | ಉಕ್ರೇನ್ ಶವಾಗಾರದಲ್ಲಿ ನವೀನ್ ಮೃತದೇಹ ಪತ್ತೆ!
ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಹಿನ್ನೆಲೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ
ಕೇಂದ್ರ ಸಚಿವ ಜೈಶಂಕರ್ ಜೊತೆ ಮಾತನಾಡಿದ್ದೇನೆ
ನವೀನ್ ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸ್ತಿದ್ದೇವೆ
ಬೆಂಗಳೂರು : ಉಕ್ರೇನ್ ನಲ್ಲಿ ಮೃತಪಟ್ಟಿರುವ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಶ ಉಕ್ರೇನ್ ನ ಶವಾಗಾರದಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಉಕ್ರೇನ್ ನಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ನವೀನ್ ಮೃತದೇಹ ಪತ್ತೆಯಾಗಿದೆ.
ಸದ್ಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ. ಮೃತದೇಹ ತರುವ ಕುರಿತಂತೆ ಕೇಂದ್ರ ಸಚಿವ ಜೈಶಂಕರ್ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದರು.
ಸದ್ಯ ಉಕ್ರೇನ್ ನಲ್ಲಿ ರಷ್ಯಾ ಸೈನಿಕರ ದಾಳಿ ಮುಂದುವರೆದಿದೆ.
ಹೀಗಾಗಿ ಉಕ್ರೇನ್ ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ.
ನವೀನ್ ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರ್ ಉಚ್ಚರಿಸಿದರು.









