Tumkur | ಬಾಲಕನ ಗುಪ್ತಾಂಗ ಸುಟ್ಟ ಶಿಕ್ಷಕಿ
ಚಡ್ಡಿಯಲ್ಲಿ ಮೂತ್ರ ಮಾಡಿಕೊಂಡಿದಕ್ಕೆ ಗುಪ್ತಾಂಗಕ್ಕೆ ಬೆಂಕಿ
ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯಲ್ಲಿ ಘಟನೆ
ಗೋಡೆಕೆರೆ ಅಂಗನವಾಡಿ ಶಿಕ್ಷಕಿಯಿಂದ ಅಮಾನವೀಯ ಕೃತ್ಯ
ಗೋಡೆಕೆರೆ ಅಂಗನವಾಡಿ ಶಿಕ್ಷಕಿ, ಸಹಾಯಕಿಗೆ ನೋಟೀಸ್ ಜಾರಿ
ತುಮಕೂರು : ಚಡ್ಡಿಯಲ್ಲಿ ಮೂತ್ರ ಮಾಡಿದ್ದಕ್ಕೆ ಬಾಲಕನ ಗುಪ್ತಾಂಗಕ್ಕೆ ಶಿಕ್ಷಕಿ ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯಲ್ಲಿ ನಡೆದಿದೆ.
ಮೂರು ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ತಿದ್ದ. ಹೀಗಾಗಿ ಬಾಲಕನನ್ನ ಹೆದರಿಸಲು ಹೋಗಿ ಬೆಂಕಿ ಕಡ್ಡಿಯಿಂದ ಚಡ್ಡಿಗೆ ಬೆಂಕಿ ಇಟ್ಟಿದ್ದಾರೆ.
ಈ ವೇಳೆ ಬೆಂಕಿ ಹೊತ್ತಿಕೊಂಡು ಬಾಲಕನ ಗುಪ್ತಾಂಗ, ತೊಡೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ.
ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳಕ್ಕೆ ಜಿಲ್ಲಾ ಮಕ್ಕಳ ಹಕ್ಕು ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಲ್ಲದೇ ಗೋಡೆಕೆರೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಗೆ ನೋಟೀಸ್ ಜಾರಿ ಮಾಡಿದ್ದಾರೆ.