ತುಮಕೂರು : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಬೈಕ್ ಸವಾರ ಸಾವು Tumkur
ತುಮಕೂರು : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗೇಟ್ ಬಳಿ ನಡೆದಿದೆ.
25 ವರ್ಷದ ಶ್ರೀಧರ್ ಮೃತ ವ್ಯಕ್ತಿಯಾಗಿದ್ದಾನೆ. ಈತ ತಿಪಟೂರಿನ ಹುಚ್ಚನಟ್ಟಿ ಚಿಪ್ಪು ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ತಮ್ಮ ಬೈಕಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದರು.
ಈ ವೇಳೆ ಎಚ್.ಬೈರಾಪುರ ಗೇಟ್ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಶ್ರೀಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಘಟನೆಯಲ್ಲಿ ಹಿಂಬದಿ ಸವಾರ ಮಂಜುನಾಥ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಹೊನ್ನವಳ್ಳಿಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









