Tumkur : ತಡ ರಾತ್ರಿ ಮನೆಯೊಳಗೆ ನುಗ್ಗಿದ ಚಿರತೆ
ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಮುದ್ದಲಿಂಗಯ್ಯನ ದೊಡ್ಡಿಯಲ್ಲಿ ಮನೆಯೊಂದಕ್ಕೆ ಚಿರತೆಯೊಂದು ನುಗ್ಗಿರುವ ಘಟನೆ ನಡೆದಿದೆ..
ಚಿರತೆ ನೋಡುತ್ತಿದ್ದಂತೆ ಕುಟುಂಬಸ್ಥರು ಹೌಹಾರಿದ್ದಾರೆ.. ಇತ್ತ ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ..
ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಚಿರತೆ ಮನೆಗೆ ನುಗ್ಗಿದೆ..
ಶಿವಣ್ಣ ಎಂಬುವವರ ಮನೆಗೆ ಚಿರತೆ ನುಗ್ಗಿದ್ದೇ ತಡ ಗಾಬರಿಯಲ್ಲಿ ಮನೆವರು ಹೊರಗೆ ಓಡಿ ಬಂದಿದ್ದಾರೆ..
ಬಳಿಕ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ..
ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಚಿರತೆ ಸೆರೆ ಹಿಡಿದಿದ್ದಾರೆ..
ಮನೆ ಬಾಗಿಲ ಬಳಿ ಬೋನ್ ಇರಿಸಿ ಚಿರತೆ ಸೆರೆಹಿಡಿಯಲಾಗಿದೆ..
ಅರವಳಿಕೆ ಮದ್ದು ನೀಡಿ ಚಿರತೆ ಸೆರೆ ಹಿಡಿಯಲಾಗಿದೆ..
ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ..
ಕುಣಿಗಲ್ ತಾಲ್ಲೂಕಿನ ಹುಲಿಯೂರು ದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.








