Tumkur | ಕೆ.ಎನ್.ರಾಜಣ್ಣ ವಿರುದ್ಧ ಬೃಹತ್ ಪ್ರತಿಭಟನೆ
ತುಮಕೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ತುಮಕೂರಿನ ಮಧುಗಿರಿ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಹೆಚ್ ಡಿ ದೇವೇಗೌಡರು ಈಗ ಇಬ್ಬರ ಹೆಗಲ ಮೇಲೆ ಕೈ ಹಾಕಿ ನಡೆಯುತ್ತಿದ್ದಾರೆ.
ಇನ್ನು ನಾಲ್ವರ ಮೇಲೆ ಹೋಗುವ ಸಮಯ ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್ ನಾಯಕ ಕೆ. ಎನ್. ರಾಜಣ್ಣ ಲೇವಡಿ ಮಾಡಿದ್ದರು.
ಈ ಹೇಳಿಕೆಯನ್ನು ಖಂಡಿಸಿ ಮಧುಗಿರಿ ಪ್ರವಾಸಿ ಮಂದಿರದಿಂದ ಡೂಮ್ ಲೈಟ್ ಸರ್ಕಲ್ ವರೆಗೆ ಒಕ್ಕಲಿಗ ಸಮುದಾಯ ಹಾಗೂ ಜೆಡಿಎಸ್ ಘಟಕದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ.
ಈ ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಜೊತೆಗೆ ರಾಜಣ್ಣರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕುತ್ತಿದ್ದಾರೆ.