Tumkur : ಟ್ರ್ಯಾನ್ಸ್ ಫಾರ್ಮರ್ ಗೆ ಸಿಲುಕಿ ಚಿರತೆ ಸಾವು
ತುಮಕೂರು : ರಾಜ್ಯದ ನಾನಾ ಕಡೆಗಳಲ್ಲಿ ಅಲ್ಲಲ್ಲಿ ಚಿರತೆ ಹುಲಿಗಳು ರಸ್ತೆಯಲ್ಲಿ ಕಾಣಿಸಿಕೊಳ್ತಿದ್ದು ಜನರು ಆತಂಕಕ್ಕೆ ಈಡಾಗಿದ್ದಾರೆ..
ಇತ್ತ ಕಾಡಿನಿಂದ ನಾಡಿಗೆ ಬಂದಿದ್ದ ಚಿರತೆಯೊಂದು ಆಕಸ್ಮಿಕವಾಗಿ ಟ್ರ್ಯಾನ್ಸ್ ಫಾರ್ಮರ್ ಗೆ ಸಿಲುಕಿ ಶಾರ್ಟ್ ಸರ್ಕ್ಯೂಟ್ ನಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತುಮಕೂರಿನಲ್ಲಿ ನಡೆದಿದೆ..
3 ವರ್ಷದ ಹೆಣ್ಣು ಚಿರತೆ ಮೃತಪಟ್ಟಿದೆ.. ಸೋಮವಾರ ತಡರಾತ್ರಿ ಕಡಬ ಹೋಬಳಿ ಕರೇಗೌಡನಹಳ್ಳಿ ಸರ್ಕಾರಿ ಶಾಲೆಯ ಬಳಿ ಈ ಘಟನೆ ನಡೆದಿದೆ.
ಮಂಗಳವಾರ ಮುಂಜಾನೆ ವಿಷಯ ತಿಳಿದ ವಲಯ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.. ಚಿರತೆ ಮೃತದೇಹವನ್ನ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ..








