ಅಪಘಾತದಲ್ಲಿ ಪ್ರಿಯಕರ ಸಾವನಪ್ಪಿದ ಬೆನ್ನಲ್ಲೇ ಆತನ ಪ್ರೇಯಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.. ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
23 ವರ್ಷದ ಧನುಷ್ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ 22 ವರ್ಷದ ಸುಷ್ಮಾ ಸಾವಿಗೆ ಶರಣಾಗಿದ್ದಾಳೆ.. ಈ ಜೋಡಿ ಶೀಘ್ರದಲ್ಲೇ ಮದುವೆಯಾಗಬೇಕಿತ್ತು.. ಧನುಷ್ ಮತ್ತು ಸುಷ್ಮಾ ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದು, ಇಬ್ಬರು ಸೇರಿ ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು.
ಆದರೆ ಮೇ 11 ರಂದು ಧನುಷ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಮೇ 14 ರಂದು ರಾತ್ರಿ ಸುಷ್ಮಾ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ.
ತುಮಕೂರುನ ಮಸ್ಕಲ್ ಗ್ರಾಮದ ಧನುಷ್, ಮೇ 11 ರಂದು ನೆಲಮಂಗಲ ಕುಲಾನಹಳ್ಳಿ ಬಳಿ ಊರಿನ ಜಾತ್ರೆಗೆ ಬರುವ ವೇಳೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಈ ಸುದ್ದಿ ಕೇಳಿ ಆಘಾತಗೊಂಡಿದ್ದ ಸುಷ್ಮಾ , ಎರೆಡು ತಿಂಗಳುಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು.. ಈ ಹಿನ್ನೆಲೆ ಸುಷ್ಮಾ ಶನಿವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ.
ತಕ್ಷಣ ಕುಟುಂಬಸ್ಥರು ಸುಷ್ಮಾಳನ್ನು ಆಸ್ಪತ್ರೆಗೆ ಕರೆದುಕೊಂಡು ಸುತ್ತಾಡಿದ್ದಾರೆ.. ಆದ್ರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಸುಷ್ಮಾ ಎಂ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದು, ಬೆಂಗಳೂರಿನಲ್ಲಿ ಧನುಷ್ ಸ್ವಂತ ಬಟ್ಟೆ ಅಂಗಡಿ ಇಟ್ಟಿದ್ದರು. ಇವರಿಬ್ಬರ ಪ್ರೀತಿಯ ವಿಚಾರ ಮನೆಯಲ್ಲಿ ತಿಳಿದ ನಂತರ ಮನೆಯವರು ಮದುವೆ ನಿಶ್ಚಯ ಮಾಡಿದ್ದರು.








