ಶಿವಮೊಗ್ಗ : ಮಲೆನಾಡು ಬಾಗದಲ್ಲಿ ಮಳೆ ಆರ್ಭಟ ಜೋರಾಗಿದೆ. ಅದ್ರಲ್ಲೂ ಶಿವಮೊಗ್ಗದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ತುಂಗೆಗೆ ಇಂದು ಸಚಿವ ಕೆ.ಎಸ್.ಈಶ್ವರಪ್ಪ ಇಂದು ಬಾಗಿನ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದೆರೆಡು ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆಯಿಂದಾಗಿ ತುಂಗಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಡ್ಯಾಂ ನಿಂದ ಹೊರಬಿಡಲಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಭರ್ತಿಯಾಗಿ ಹರಿಯುತ್ತಿದ್ದು, ಕೋರ್ಪಲಯ್ಯನ ಛತ್ರದ ಬಳಿಯ ಮಂಟಪ ಮುಳುಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು. ತುಂಗಾ ನದಿ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದು ಸಂತಸ ತಂದಿದೆ. ಇನ್ನೂ ಕಳೆದ ಬಾರಿಯಂತೆ ಈ ಬಾರಿ ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತುಂಗೆಗೆ ಬಾಗಿನ ಅರ್ಪಿಸಿ ಬೇಡಿಕೊಂಡಿದ್ದಾಗಿ ಈಶ್ವರಪ್ಪ ಅವರು ತಿಳಿಸಿದ್ದಾರೆ.
ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...








