ಇಸ್ತಾಂಬುಲ್: ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ ಗಾಯಗೊಂಡಿದ್ದಾರೆ.
ಶಾಲೆ ಸೆಮಿಸ್ಟರ್ ಹಾಲಿಡೇಸ್ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದೆ. 12 ಅಂತಸ್ತಿನ ಹೋಟೆಲ್ ನಲ್ಲಿ 234 ಅತಿಥಿಗಳಿಗೆ ಆತಿಥ್ಯ ನೀಡಲಾಗಿತ್ತು.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು 76 ಶವಗಳನ್ನು ಹೊರ ತೆಗೆದಿದ್ದು, 45 ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳ ಗುರುತು ಪತ್ತೆ ಮಾಡಲು ಅಧಿಕಾರಿಗಳು ಯತ್ನಿಸುತ್ತಿದ್ದಾರೆ. ಮರದಿಂದಲೇ ಮಾಡಲಾಗಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್ ನಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದೆ.