ಕಾಶ್ಮೀರ ವಿಚಾರ: ಟರ್ಕಿ ಅಧ್ಯಕ್ಷರ ಹೇಳಿಕೆಗೆ ಭಾರತ ತಿರುಗೇಟು…

1 min read
Turkey

ನವದೆಹಲಿ:
ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಹಾಗೂ ನಾಶಪಡಿಸಲಾಗದ ಭಾಗವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಪಾಕಿಸ್ತಾನದಿಂದ ಭಾರತದ ಮೇಲೆ ಉಂಟಾಗುತ್ತಿರುವ ಭಯೋತ್ಪಾದನೆ ಬೆದರಿಕೆ ಮತ್ತಿತರ ನೈಜ ಅಂಶಗಳನ್ನು ಅರ್ಥಮಾಡಿಕೊಳ್ಳದೆ ಭಾರತದ ಆಂತರಿಕ ವ್ಯವಹಾರದಲ್ಲಿ ತಲೆ ಹಾಕದಂತೆ ಟರ್ಕಿ ನಾಯಕರಿಗೆ ಹೇಳಲು ಬಯಸುತ್ತೇವೆ ಎಂದು ರವೀಶ್ ಕುಮಾರ್ ತಿಳಿಸಿದ್ದಾರೆ.

ಇನ್ನು ಶುಕ್ರವಾರ ಪಾಕಿಸ್ತಾನ ಸಂಸತ್ತಿನಲ್ಲಿ ಮಾತನಾಡಿದ ಟರ್ಕಿ ಅಧ್ಯಕ್ಷ ಎರ್ಡೋಗನ್, ಮೊದಲನೆಯ ಮಹಾಯುದ್ಧದ ಸಮಯದಲ್ಲಿ ವಿದೇಶಿ ಪ್ರಾಬಲ್ಯದ ವಿರುದ್ಧ ಟರ್ಕಿಶ್ ಜನರು ನಡೆಸಿದ ಹೋರಾಟದೊಂದಿಗೆ ಕಾಶ್ಮೀರಿ ಜನರ ಹೋರಾಟ ವನ್ನು ಹೋಲಿಕೆ ಮಾಡಿದ್ದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd