ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಡಾ.ಕೆ ಸುಧಾಕರ್ ನಡುವೆ ಟ್ವೀಟ್ ವಾರ್ ಮುಂದುವರಿದಿದೆ. ನಿನ್ನೆ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಎಂದಿದ್ದ ಸುಧಾಕರ್ ಹೇಳಿಕೆಗೆ ಇಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲದೇ 13 ಬಾರಿ ಬಜೆಟ್ ಮಂಡಿಸಿಲ್ಲ ಎಂದು ಕುಟುಕಿದ್ದರು.
ಇದೀಗ ಈ ವಿಚಾರವಾಗಿ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದು, ಮಾನ್ಯ ಸಿದ್ದರಾಮಯ್ಯನವರು ನಾನು ಅಧಿಕಾರದ ಅಹಂನಿಂದ ಮಾತನಾಡಿದ್ದೇನೆ ಮತ್ತು ನನಗೆ ಉಪಕಾರ ಸ್ಮರಣೆ ಇರಬೇಕು ಎಂದಿದ್ದಾರೆ. ಅವರು ಹಿಂದೆ ನೀಡಿರುವ ಸಹಕಾರ ಮತ್ತು ಮಾರ್ಗದರ್ಶನವನ್ನು ಸದಾ ಸ್ಮರಿಸುತ್ತೇನೆ ಮತ್ತು ನನ್ನ ಅಳಿಲು ಸೇವೆಯನ್ನು ಅವರೂ ಸಹ ಮರೆತಿಲ್ಲ ಎಂದು ಭಾವಿಸಿದ್ದೇನೆ ಎಂದಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ಕಳೆದ 5 ತಿಂಗಳಿನಿಂದ ವೈದ್ಯಕೀಯ ಶಿಕ್ಷಣ ಇಲಾಖೆಯ ಜವಾಬ್ದಾರಿ ಹೊತ್ತು ಕಾರ್ಯಕ್ಷಮತೆಯಿಂದ ಅವಿರತವಾಗಿ ಶ್ರಮಿಸುತ್ತಿರುವ ಸನ್ನಿವೇಶದಲ್ಲಿ ನನ್ನ ಇಲಾಖೆಯ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳು ಬಂದಾಗ ಜವಾಬ್ದಾರಿಯುತವಾಗಿ ವಾಸ್ತವಾಂಶವನ್ನು ಜನರು ಮುಂದುಟ್ಟಿದ್ದೇನೆ. ಇದರಲ್ಲಿ ಯಾವುದೇ ವೈಯಕ್ತಿಕ ನಿಂದನೆ ಅಥವಾ ಅಪಹಾಸ್ಯದ ಉದ್ದೇಶವಿಲ್ಲ ಎಂದು ಬರೆದುಕೊಂಡಿದ್ದಾರೆ.








