Twins & mother Death
ಸರಕಾರದ ಎಚ್ಚೆತ್ತು ಕೊಳ್ಳಲು ಅಮಾಯಕ ಪುಟ್ಟ್ ಜೀವಗಳ ಬಲಿ ತೆಗೆದು ಕೊಂಡಿದೆ. ಇತ್ತಿಚಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ನಡೆದ ಬಾಣಂತಿ ಮತ್ತು ಅವಳಿ ಶಿಶುಗಳ ಸಾವಿನ ಪ್ರಕರಣದ ನಂತರ ಆರೋಗ್ಯ ಇಲಾಖೆಗೆ ಅರಿವು ಮೂಡಿದೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮಾರ್ಗಸೂಚಿಗಳನ್ನು ತಿದ್ದುಪಡೆ ಮಾಡಿ ಪ್ರಕಟಿಸಿದೆ.
ಇನ್ನು ಮುಂದೆ ತುರ್ತು ಆರೋಗ್ಯ ಸೇವೆಯನ್ನು ಮಾರ್ಗಸೂಚಿಯಂತೆ ನೀಡುವ ಸಂದರ್ಭದಲ್ಲಿ ತಾಯಿ ಕಾರ್ಡ್ ಆಧಾರ್ ಕಾರ್ಡ್, ಪಡಿತರ ಕಾರ್ಡ್ ಇತ್ಯಾದಿ ಯಾವುದೇ ದಾಖಲೆಗಳು ಸಲ್ಲಿಸುವ ಅವಶ್ಯವಿರುವುದಿಲ್ಲ.
ಆರೋಗ್ಯ ಇಲಾಖೆ ತಂದಿರುವ ಹೋಸ ಮಾರ್ಗ ಸೂಚಿ ಈ ಕೇಳಗಿನಂತಿದೆ
ತಾಯಿ ಕಾರ್ಡ್, ಆಧಾರ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಚಿಕಿತ್ಸೆ ನೀಡಬೇಕು.
ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು.
ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ.
ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು.
ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ.
ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯ.
ಇಂತಹ ಘಟನೆಯು ಮರುಕಳಿಸಿದರೆ ಅಂತಹ ಅಧಿಕಾರಿ, ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗುವುದು, ಅಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುತ್ತದೆ.
ಇದನ್ನೂ ಓದಿ – https://saakshatv.com/jammu-kashmir-te…rkers-in-kashmir/








