ಶ್ರೀನಗರ: ಉಗ್ರರ ನೆರವಿಗೆ ನಿಂತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಜೌರಿಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಫಾರೂಕ್ ಹಾಗೂ ಮೊಹಮ್ಮದ್ ನಜೀರ್ ಬಂಧಿತರು. ಬುಧಾಲ್ ಪ್ರದೇಶದ ಬೆಹ್ರೋಟ್ ಗ್ರಾಮದಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳು ಪತ್ತೆಯಾಗಿವೆ. ಆರೋಪಿಗಳು ಉಗ್ರರಿಗೆ ಮಾಹಿತಿ ನೀಡುವುದು ಸೇರಿದಂತೆ ಅನೇಕ ರೀತಿಯ ನೆರವು ನೀಡಿರುವ ಶಂಕೆ ಇದೆ ಎಂದು ಪೊಲೀಸರು (Police) ಹೇಳಿದ್ದಾರೆ.
ಬಂಧಿತರಿಂದ ಪಿಸ್ತೂಲ್, ಎರಡು ಮ್ಯಾಗ್‍ಜಿನ್, 30 ಸಜೀವ ಗುಂಡುಗಳು, ಎರಡು ಹ್ಯಾಂಡ್ ಗ್ರೆನೇಡ್ ಮತ್ತು ವೈರ್ ಕಟ್ಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.