ಬಿಂದಿಗೆ ಮಾರಾಟ ನೆಪದಲ್ಲಿ ಗಾಂಜಾ ಮಾರಾಟ : ಇಬ್ಬರ ಬಂಧನ
ಚಿಕ್ಕಬಳ್ಳಾಪುರ : ಬಿಂದಿಗೆ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಶಿಡ್ಲಘಟ್ಟ ಸಿಪಿಐ ಸುರೇಶ್ ಅವರು ಯಶಸ್ವಿಯಾಗಿದ್ದಾರೆ.
ವೆಂಕಟರಮಣಪ್ಪ, ಪ್ರಕಾಶ್ ಬಂಧಿತ ಆರೋಪಿಗಳಾಗಿದ್ದು, ಇವರು ಆಂಧ್ರದ ಮೂಲದವರು ಎಂದು ಗುರುತಿಸಲಾಗಿದೆ.
ಇವರು ದಿಬ್ಬೂರಹಳ್ಳಿ ಬಳಿ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದು, ಗೂಡ್ಸ್ ವಾಹನದ ತುಂಬ ಪ್ಲಾಸ್ಟಿಕ್ ಬಿಂದಿಗೆ ಹಾಗೂ ಸಿಲ್ವರ್ ಆಡುಗೆ ಸಾಮಾನುಗಳನ್ನು ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದರು.
ಆದರೆ ಅವರು ಬಿಂದಿಗೆ ಹೆಸರಿನಲ್ಲಿ ಗಾಂಜಾ ವ್ಯಾಪಾರ ಮಾಡುತ್ತಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಪಿಐ ಸುರೇಶ್ ಮತ್ತವರ ತಂಡ ವಾಹನ ಸಮೇತ 17 ಲಕ್ಷ ರೂ. ಮೌಲ್ಯದ 34 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಇನ್ನು ಈ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










