ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು….
ವಿದ್ಯುತ್ ಸ್ಪರ್ಶಿಸಿ ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಘಟನೆ.
ಮನೆಯಲ್ಲಿ ಬಟ್ಟೆ ಒಣ ಹಾಕೋವಾಗ ಅರ್ಥಿಂಗ್ ವೈರ ಸ್ಪರ್ಶಿಸಿ, 28 ವರ್ಷದ ತಾಯಿ ಶೈಲಮ್ಮ ಮಕ್ಕಳಾದ 2 ವರ್ಷದ ಪವನ್ ಹಾಗೂ 3 ವರ್ಷದ ಸಾನ್ವಿ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ ಕಟುಂಬಸ್ಥರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ;ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಕನಕಗಿರಿ ಶಾಸಕ ಬಸವರಾಜ್ ಧಡೇಸುಗೂರು ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.
two children and mother died after electric shock in koppal