ಚಿಕ್ಕಬಳ್ಳಾಪುರ ಹಾಗೂ ಆಂಧ್ರಪ್ರದೇಶ ಗಡಿಯ ಚೀಲಮತ್ತೂರು ಹತ್ತಿರ ಭೀಕರ ಅಪಘಾತ (Road Accident) ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರು ಮತ್ತು ಬುಲೆರೋ ಗೂಡ್ಸ್ ವಾಹನಗಳ ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬುಲೆರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬಾಗೇಪಲ್ಲಿಯ ವೆಂಕಟೇಶ್ ಎಂಬ ವ್ಯಕ್ತಿಗೆ ಸೇರಿದ ಫರ್ಚುನರ್ ವಾಹನ ಎನ್ನಲಾಗಿದೆ.
ಸ್ಥಳಕ್ಕೆ ಚೀಲಮತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಚೀಲಮತ್ತೂರು ಮತ್ತು ಹಿಂದೂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾರ್ಚುನರ್ ವಾಹನದ ಅತಿ ವೇಗ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.








