ಸಿಡಿಲು ಬಡಿದ ಪರಿಣಾಮ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರಿನಲ್ಲಿ ನಡೆದಿದೆ. ಹೊಲದಲ್ಲಿ ಇಬ್ಬರು ರೈತರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾಟಲಿಂಗಪ್ಪ(43), ರಾಜು(35) ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಶಾಸಕ ಬಿ.ದೇವೇಂದ್ರಪ್ಪ, ತಹಸೀಲ್ದಾರ್ ಸಂತೋಷ್ ಭೇಟಿ ನೀಡಿದ್ದು, ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.