ಕೊಪ್ಪಳ: ಕಾಲು ಜಾರಿ ಬಾವಿಯಲ್ಲಿ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಕೊಪ್ಪಳ (Koppal) ತಾಲ್ಲೂಕಿನ ಜಿನ್ನಾಪುರ ತಾಂಡಾದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿ ನಡೆದಿದೆ. ಜಮೀನಿನಲ್ಲಿದ್ದ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ.
ತಮ್ಮದೇ ತೋಟದ ಮನೆಯ ಹತ್ತಿರ ಇದ್ದ ಬಾವಿಯ ಬಳಿ ಬಾಲಕಿಯರು ಆಟವಾಡುವಾಗ ಈ ಘಟನೆ ನಡೆದಿದೆ. ಸೌಂದರ್ಯ ಪೂಜಾರ (11) ಲಕ್ಷ್ಮಿ ಪೂಜಾರ (10) ಸಾವನ್ನಪ್ಪಿರುವ ದುರ್ದೈವಿಗಳು. ಕಾಲು ಜಾರಿ ನೀರಿನಲ್ಲಿ ಬೀಳುತ್ತಿದ್ದಂತೆ ಇದನ್ನು ಯಾರೂ ಗಮನಿಸಿಲ್ಲ. ಹೀಗಾಗಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಹಾಗೂ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹ ಹೊರ ತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.