ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಜಾರಿ ಮಾಡಲಾಗಿದ್ದ ಲಾಕ್ ಡೌನ್, ಸಡಿಲಿಕೆ ಆಗುತ್ತಿದ್ದಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಅಲ್ಲದೆ ಹೆಮ್ಮಾರಿ ವೈರಸ್ ಗೆ ಹೆಚ್ಚಿನ ಜನರು ಬಲಿಯಾಗುತ್ತಿದ್ದಾರೆ. ಏತನ್ಮಧ್ಯೆ ಇದೀಗ ಬೆಂಗಳೂರಿನಲ್ಲಿ ಕಿಲ್ಲರ್ ಕೊರೊನಾಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಕೊರೊನಾ ಸೋಂಕು ರೋಗಿಗಳು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. 61 ವರ್ಷದ ಮಹಿಳೆ ಮತ್ತು 57 ವರ್ಷದ ಪುರುಷ ಹೆಮ್ಮಾರಿ ವೈರಸ್ ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ ಆಗಿದೆ.
ಒಬ್ಬ ರೋಗಿ ರಾಜೀವ್ ಗಾಂಧಿ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಕಳುಹಿಸಲಾಗಿತ್ತು. ಮತ್ತೊಬ್ಬ ಸೆಂಟ್ ಮಾರ್ಥಾಸ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್ ಆಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಇಬ್ಬರು ಮೃತಪಟ್ಟಿದ್ದಾರೆ.








