ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿ : ಇಬ್ಬರು ಸಾವು
1 min read
vijayapura : ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿ : ಇಬ್ಬರು ಸಾವು
ವಿಜಯಪುರ : ಸಿಮೆಂಟ್ ತುಂಬಿದ್ದ ವಾಹನ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಬಳಿ ನಡೆದಿದೆ.
ಗೆದ್ದಲಮರಿ ತಾಂಡಾದ ನಿವಾಸಿ ವೆಂಕಟೇಶ್ ಪವಾರ(40) ಹಾಗೂ ಢವಳಗಿ ನಿವಾಸಿ ನಾಗಪ್ಪ ದಂಡೆನ್ನವರ್(45) ಮೃತ ದುರ್ದೈವಿಗಳಾಗಿದ್ದಾರೆ.
ಮುದ್ದೇಬಿಹಾಳದಿಂದ ನೇಬಗೇರಿಗೆ ಸಿಮೆಂಟ್ ತುಂಬಿಕೊಂಡು ಹೊಗುವಾಗ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟರೆ ಇನ್ನಿಬ್ಬರಿಗೆ ಗಾಯಗಳಾಗಿವೆ. ಸದ್ಯ
ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
