ಜವರಾಯನ ಅಟ್ಟಹಾಸ : ಅಪಘಾತದಲ್ಲಿ ಇಬ್ಬರು ಸಾವು
ಚಿಕ್ಕಬಳ್ಳಾಪುರ : ಬೆಳ್ಳಂ ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದಾನೆ.
ಬೈಕ್ ಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಇಬ್ಬರೂ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಂದಾರ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
20 ವರ್ಷದ ಮೌಲಾ ಮತ್ತು 20 ವರ್ಷದ ಉಮರ್ ಮೃತ ದುರ್ದೈವಿಗಳಾಗಿದ್ದು, ಇವರನ್ನು ದೊಡ್ಡಬಳ್ಳಾಪುರದ ಮೂಲದವರು ಎಂದು ಗುರುತಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಂಚೇನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Two killed in Chikkaballapur accident saaksha tv