ಚಾಮರಾಜನಗರ : ಗಡಿನಾಡು ಚಾಮರಾಜನಗರದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಕೊನೆಯುಸಿರೆಳೆದಿದ್ದಾರೆ.
ಜಿಲ್ಲೆಯ ಕೊಳ್ಳೇಗಾಲದ 70 ವರ್ಷದ ಪುರುಷ ಹಾಗೂ ಚಾಮರಾಜನಗರದಲ್ಲಿ ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ರಕ್ಕಸ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 26ಕ್ಕೆ ತಲುಪಿದೆ.








