ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿಕೊರೊನಾಗೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿAದ ಬಳಲುತ್ತಿದ್ದ ಉಳ್ಳಾಲ ಮೂಲದ 52 ವರ್ಷದ ಮಹಿಳೆ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಇನ್ನೊಂದೆಡೆ, ಮಂಗಳೂರು ಹೊರವಲಯದ ಸಂತೋಷ್ ನಗರದ 52 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಹೃದಯ ಸಂಬAಧಿ ತೊಂದರೆ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 147 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು. ಇಂದೂ ಕೂಡ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...







