ಮರಕ್ಕೆ KSRTC ಬಸ್ ಡಿಕ್ಕಿ : ಇಬ್ಬರು ಸಾವು
ತುಮಕೂರು : ಕೆಎಸ್ ಆರ್ ಟಿಸಿ ಬಸ್ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಾಪುರದಲ್ಲಿ ನಡೆದಿದೆ.
ಘಟನೆಯಲ್ಲಿ 10 ಮಂದಿಗೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದ್ರೆ ಬಸ್ ಮರಕ್ಕೆ ಡಿಕ್ಕಿ ಹೊಡೆಯುವ ಸಂದರ್ಭದಲ್ಲಿ ರಸ್ತೆ ಬದಿ ಇದ್ದ ಭಿಕ್ಷುಕ ಸಿಕ್ಕಿಕೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಇತ್ತ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ರೈತ ಗೋಪಾಲ ನಾಯ್ಕ ಎಂಬೋರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಉಸಿರು ನಿಲ್ಲಿಸಿದ್ದಾರೆ.
ಇನ್ನು ಈ ಘಟನೆಯಲ್ಲಿ ನಿರ್ವಾಹಕರಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.









