ಅಕಾಲಿಕ ಮಳೆಗೆ ಕರುನಾಡು ಕಂಗಾಲು : ಇನ್ನೂ ಎರಡು ದಿನ ವರ್ಷಧಾರೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಹುಬ್ಬಳ್ಳಿ, ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ರಾಯಚೂರು, ಬೀದರ್, ಬಳ್ಳಾರಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲ್ಲಿದೆ.
ಇತ್ತ ಕರಾವಳಿ ಭಾಗದಲ್ಲಿ ಮಳೆಯಾಗುವ ಕಾರಣದಿಂದಾಗಿ ಆ ಭಾಗದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೊಡಗು, ಮಂಡ್ಯದಲ್ಲಿಯೂ ಸಾಧಾರಣ ಮಳೆ ಮುಂದುವರಿಯಲಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆಯ ಅಬ್ಬರ ಇರಲಿದ್ದು, ಸಂಜೆ ವೇಳೆಗೆ ವರುಣ ಆರ್ಭಟಿಸಲಿದ್ದಾನೆ.