ದೇಶದ ಅಖಂಡತೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಕಾನ್ಫರೆನ್ಸ್ ಜಮ್ಮು-ಕಾಶ್ಮೀರ( ಸುಮ್ಜಿ ಗ್ರೂಪ್) ಹಾಗೂ ಮುಸ್ಲಿಂ ಕಾನ್ಫರೆನ್ಸ್ (ಭಟ್ ಗ್ರೂಪ್) ಅನ್ನು 5 ವರ್ಷಗಳ ಕಾಲ ನಿಷೇಧ ಮಾಡಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ನಿಷೇಧಿತ ಸಂಘಟನೆಗಳು ದೇಶದ ಅಖಂಡತೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿವೆ ಎಂದು ಹೇಳಿದ್ದಾರೆ. ಅಲ್ಲದೆ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರು ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.
ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನು ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ. ರಾಷ್ಟ್ರದ ಭದ್ರತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧ ಸಂಘಟನೆ ತನ್ನ ಚಟುವಟಿಕೆಗಳನ್ನು ಮುಂದುವರೆಸುತ್ತಿದೆ ಎಂಬುವುದು ಕಂಡು ಬಂದಿದೆ ಎಂದು ಹೇಳಿದ್ದಾರೆ.