ರಾಜ್ಯದಲ್ಲಿ ಮತ್ತೆ ಮಹಾಮಾರಿಯ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ರಾಜ್ಯದಲ್ಲಿ 173 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಬೆಂಗಳೂರಿನಲ್ಲಿ 82 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರಿನಲ್ಲಿ 16, ದಕ್ಷಿಣ ಕನ್ನಡದಲ್ಲಿ 13 ಜನರಲ್ಲಿ ಸೋಂಕು ಕಂಡು ಬಂದ ವರದಿಯಾಗಿದೆ. ರಾಜ್ಯದಲ್ಲಿ ಸದ್ಯ 702 ಸಕ್ರೀಯ ಪ್ರಕರಣಗಳಿದ್ದು, ಮನೆಯಲ್ಲಿ 649 ಜನ, ಆಸ್ಪತ್ರೆಯಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ, 12 ಜನ ಐಸಿಯುನಲ್ಲಿದ್ದರೆ, 41 ಮಂದಿ ಜನರಲ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 37 ಜನ ಡಿಸ್ಟಾರ್ಜ್ ಆಗಿದ್ದಾರೆ.