ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು 4ರ ಸಾವು ಇಬ್ಬರಿಗೆ ಗಾಯ
ಗುಜರಾತ್ ರಾಜ್ಯದ ವಡೋದರಾದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸ್ಪೋಟದ ತೀವ್ರತೆ 3 ಕಿ.ಮೀ ದೂರದವರೆಗೂ ಶಬ್ದ ಕೇಳಿಬಂದಿದೆ, ಗಾಜಿನ ಕಿಟಕಿಗಳು ಒಡೆದು ಹೋಗಿವೆ.
ಮಕರಪುರ ಜಿಐಡಿಸಿ ಪ್ರದೇಶದಲ್ಲಿನ ಕ್ಯಾಂಟನ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಮಂಜಲ್‌ಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಎಸ್ ಜೆ ಬಲೋಚ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.ಸ್ಫೋಟದ ಹಿನ್ನೆಲೆಯಲ್ಲಿ ವಡ್ಸರ್ ರೈಲ್ವೇ ಮೇಲ್ಸೇತುವೆಯ ಮೇಲಿನ ಸಂಚಾರವನ್ನು ಸಹ ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು. ಈ ಘಟನೆಗೆ ನಿಖರವಾದ ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.








