ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಸ್ಥಳೀಯ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನೈಜೀರಿಯಾ ಮೂಲದ ಮಿಖಾಯಿಲ್ ಡೈಕೆ ಒಕೋಲಿ ಹಾಗೂ ಬೆಂಗಳೂರಿನ ಸಹನಾ ದಾಸ್ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಬಂಧಿತರಿಂದ ಬರೋಬ್ಬರಿ 1.50 ಕೋಟಿ ರೂ. ಮೌಲ್ಯದ 1 ಕೆ.ಜಿ 50 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 3 ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್‌ನಲ್ಲಿ ವಾಸವಾಗಿದ್ದ ಆರೋಪಿಗಳಿಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಹಿಂದೆ ಕೆ. ಆರ್. ಪುರಂನಲ್ಲಿ ವಾಸವಿದ್ದ ಮಿಖಾಯಿಲ್ ಡೈಕೆ ಒಕೋಲಿಗೆ ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾಳ ಪರಿಚಯವಾಗಿತ್ತು. ನಂತರ ಇಬ್ಬರೂ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್‌ನಲ್ಲಿ ವಾಸವಾಗಿದ್ದರು. ಮಿಖಾಯಿಲ್ ವಿರುದ್ಧ 2018ರಲ್ಲಿಯೂ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.








