ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ (Jammu And Kashmir) ಬಾರಾಮುಲ್ಲಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎನ್ನಲಾಗಿದೆ.
ದಾಳಿಯಲ್ಲಿ ಇಬ್ಬರು ಹಮಾಲರು ಕೂಡ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ ಹಾಕಲಾಗಿದೆ. ಬಾರಾಮುಲ್ಲಾದ ಬುತಪತ್ರಿಯ ಸಾಮಾನ್ಯ ಪ್ರದೇಶದಲ್ಲಿ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿರುವುದು ಈ ಮೂಲಕ ಖಚಿತ ಪಡಿಸಿದೆ.
ಬೂತಪತ್ರಿಯಲ್ಲಿ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಮಿಕನೊಬ್ಬನ ಮೇಲೆ ಗುಂಡು ಹಾರಿಸಲಾಗಿತ್ತು. ಇದಾದ ಕೆಲವು ಗಂಟೆಗಳಲ್ಲಿ ಈ ಘಟನೆ ನಡೆದಿದೆ.
ಸೇನಾ ವಾಹನದ ಮೇಲೆ ಇಂದು ನಡೆದ ದಾಳಿಯು ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ 72 ಗಂಟೆಗಳಲ್ಲಿ ನಡೆದ ಎರಡನೇ ದಾಳಿಯಾಗಿದೆ. ಮೂರು ದಿನಗಳ ಹಿಂದೆ ಇಬ್ಬರು ಭಯೋತ್ಪಾದಕರು ಸುರಂಗವನ್ನು ನಿರ್ಮಿಸುವ ಕಾರ್ಮಿಕರ ವಸತಿ ಶಿಬಿರದ ಮೇಲೆ ದಾಳಿ ಮಾಡಿದ್ದರು. ದಾಳಿಯಲ್ಲಿ ಆರು ಜನ ಕಾರ್ಮಿಕರು ಹಾಗೂ ಓರ್ವ ವೈದ್ಯ ಹತ್ಯೆಯಾಗಿದ್ದರು.








