ಮೊಹರಂ ಮೆರವಣಿಗೆ ವೇಳೆ ಗುಂಪು ಘರ್ಷಣೆ – ಇಬ್ಬರಿಗೆ ಚಾಕು ಇರಿತ… – muharram procession group clash
ಮೊಹರಂ ಮೆರವಣಿಗೆ ವೇಳೆ ಎರಡು ಗುಂಪುಗಳ ಮಧ್ಯ ಗಲಾಟೆ ನಡೆದಿದ್ದು, ಇಬ್ಬರಿಗೆ ಚಾಕು ಇರಿದಿರುವ ಘಟನೆ ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ. ತೌಸಿಫ್ ಹೊಸಮನಿ(23), ಮುಸ್ತಾಕ್ ಹೊಸಮನಿ (24) ಹಲ್ಲೆಗೊಳಗಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊಹರಂ ಮೆರವಣಿಗೆಯಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆ ಬಿಡಸಲು ಬಂದಿದ್ದ ತೌಸಿಫ್ ಮುಸ್ತಾಫ್‌ನಿಗೆ ಸೋಮೇಶ್ ಗುಡಿ ಎಂಬಾತ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೌಸಿಫ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
“ಗಂಭೀರವಾಗಿ ಗಾಯಗೊಂಡಿರುವ ತೌಸಿಫ್ ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗಾಗಲೇ ಘಟನೆ ಸಂಬಂಧ ಯಲ್ಲಪ್ಪ ಹಾಗೂ ಸೋಮು ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ” ಎಂದು ಘಟನೆ ಸಂಬಂಧ ಎಸ್ ಪಿ ಶಿವಪ್ರಕಾಶ್ ದೇವರಾಜು ಮಾಹಿತಿ ತಿಳಿಸಿದ್ದಾರೆ.
ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಎಸ್ ಪಿ ಶಿವಪ್ರಕಾಶ್ ದೇವರಾಜು, ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟಿ ಮಲ್ಲಸಮುದ್ರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದ್ದು.