ಸೆಪ್ಟಿಕ್ ಟ್ಯಾಂಕ್ ನಲ್ಲಿ ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ ಕಾರ್ಮಿಕರು
ಮಹಾರಾಷ್ಟ್ರ: ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪಿರುವ ಘಟನೆ ಥಾಣೆಯ ಮುಂಬ್ರಾ ಪ್ರದೇಶದಲ್ಲಿ ಹೌಸಿಂಗ್ ಸೊಸೈಟಿಯೊಂದರಲ್ಲಿ ನಡೆದಿದೆ.
ಹನುಮಾನ್ ಕೊರ್ಪಕ್ವಾಡ್ (25), ಸೂರಜ್ ಮದ್ವಿ (22) ಮೃತ ದುರ್ದೈವಿಗಳು. ಮುಂಬ್ರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಕೆ ನಡೆಸುತ್ತಿದ್ದಾರೆ.
ಮಂಗಳವಾರ ಮುಂಬ್ರಾ ಪ್ರದೇಶದಲ್ಲಿ ಹೌಸಿಂಗ್ ಸೊಸೈಟಿಯೊಂದರ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಖಾಸಗಿ ಗುತ್ತಿಗೆದಾರರೊಬ್ಬರು ಆರು ಮಂದಿ ಕಾರ್ಮಿಕರನ್ನು ನೇಮಿಸಿಕೊಂಡಿದ್ದರು. ಅವರಲ್ಲಿ ಇಬ್ಬರು ಸಂಜೆ 6.30ರ ಸುಮಾರಿಗೆ ಟ್ಯಾಂಕ್ ಒಳಗೆ ಇಳಿದಿದ್ದರು. ಈ ವೇಳೆ ವಿಷ ಅನಿಲ ಸೇವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.