ತುಮಕೂರು: ಬಂಡೆ ಬ್ಲಾಸ್ಟ್ (Rock Blast) ಮಾಡುವ ಸಂದರ್ಭದಲ್ಲಿ ದುರ್ಘಟನೆಯೊಂದು ನಡೆದಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಿಹಾರ ಮೂಲದ ಮೊಹಮ್ಮದ್ ಅಬೂಲ್ (29) ಹಾಗೂ ಛತ್ತೀಸ್‌ಗಢ ಮೂಲದ ಮೋನು (24) ಸಾವನ್ನಪ್ಪಿದ ದುರ್ದೈವಿಗಳು. ತಾಲೂಕಿನ ಕೌತಮಾರನಹಳ್ಳಿ ಬಳಿಯಿರುವ ಕರ್ನಾಟಕ ಸ್ಟೋನ್ ಕ್ರಷರ್‌ನಲ್ಲಿ ಈ ಘಟನೆ ನಡೆದಿದೆ.
ತುಮಕೂರು ಮೂಲದ ಕೆ.ಎ.ಎಂ ಹನೀಫ್ ಎಂಬ ವ್ಯಕ್ತಿಗೆ ಈ ಕ್ರಷರ್ ಸೇರಿದ್ದು, ಕ್ರಷರ್‌ನಲ್ಲಿ ಬಂಡೆಗೆ ಡ್ರಿಲ್ ಮಾಡಲು ಬೆಟ್ಟ ಹತ್ತಿದ ಇಬ್ಬರು ಕಾರ್ಮಿಕರು ಆಯತಪ್ಪಿ ಸುಮಾರು 100 ಅಡಿ ಎತ್ತರದಿಂದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಮಾಲೀಕನ ಬೇಜವಾಬ್ದಾರಿತನದಿಂದಾಗಿ ಈ ಘಟನೆ ನಡೆದಿದೆ ಎನ್ಲನಾಗಿದೆ. ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.