ಉಡುಪಿ: ಮೀನು ಹಿಡಿಯಲು ಹೋಗಿ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ನಡೆದಿದೆ.
ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಸಾವನ್ನಪ್ಪಿದ ದುರ್ದೈವಿಗಳು. ಇಬ್ಬರೂ ಯುವಕರು ಮೀನು ಹಿಡಿಯಲೆಂದು ಇಂದು ಬೆಳಿಗ್ಗೆ ನಾಗರ ಮಠದ ಸೀತಾ ನದಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಮೀನಿಗೆ ಬಲೆ ಹಾಕುವ ವೇಳೆ ನೀರಿನ ಸಭಸಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.