U-19 World Cup | ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು
ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಇಂದಿನಿಂದ ಟೀಂ ಇಂಡಿಯಾ ಅಭಿಯಾನ ಆರಂಭಿಸಲಿದೆ.
ಭಾರತ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.
ಈ ಪಂದ್ಯ ಗಯಾನಾ ಮೈದಾನದಲ್ಲಿ ನಡೆಯಲಿದ್ದು, ಉತ್ತಮ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಅಂಡರ್-19 ವಿಶ್ವಕಪ್ ಇತಿಹಾಸದಲ್ಲಿ ಈವರೆಗೂ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಒಟ್ಟು 7 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 3 ಮತ್ತು ದಕ್ಷಿಣ ಆಫ್ರಿಕಾ ತಂಡ 4 ರಲ್ಲಿ ಜಯ ಸಾಧಿಸಿದೆ.
ಅಂಡರ್-19 ವಿಶ್ವಕಪ್ನ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಭಾರತ ತಂಡ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ತಂಡಗಳನ್ನು ಸೋಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ವಿಶ್ವಕಪ್ಗೆ ಭಾರತೀಯ ತಂಡ: ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಆಂಗ್ಕ್ರಿಶ್ ರಘುವಂಶಿ, ಎಸ್ಕೆ ರಶೀದ್ (ಉಪನಾಯಕ), ನಿಶಾಂತ್ ಸಿಂಧು,
ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (ಡಬ್ಲ್ಯುಕೆ), ಆರಾಧ್ಯ ಯಾದವ್ (ವಿಕೆಟ್ ಕೀಪರ್), ರಾಜ್ ಅಂಗದ್ ಬಾವಾ , ಮಾನವ್ ಪ್ರಕಾಶ್,
ಕೌಶಲ್ ತಾಂಬೆ, ಆರ್ ಎಸ್ ಹಂಗಾರೇಕರ್, ವಾಸು ವಾಟ್ಸ್, ವಿಕ್ಕಿ ಓಸ್ತ್ ವಾಲ್, ರವಿಕುಮಾರ್, ಗರ್ವ್ ಸಾಂಗ್ವಾನ್.