UAE ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನ…..

1 min read

UAE ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ನಿಧನ…..

ಯುನೈಟೆಡ್ ಅರಬ್ ಎಮಿರೇಟ್ಸ್( UAE ) ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶುಕ್ರವಾರ 73ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ.

ಎಮಿರೇಟ್ಸ್ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಸಾವಿಗೆ ಸಂತಾಪ ಸೂಚಿಸಿ, ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಅವರ ತಂದೆಯ ನಂತರ ಶೇಖ್ ಖಲೀಫಾ ಅವರು ನವೆಂಬರ್ 2004ಲ್ಲಿ ಯುಎಇಯ ಎರಡನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಫೆಡರೇಶನ್‌ನ ಏಳು ಎಮಿರೇಟ್‌ಗಳಲ್ಲಿ ಶ್ರೀಮಂತ ಅಬುಧಾಬಿಯ 16ನೇ ಆಡಳಿತಗಾರರಾಗಿದ್ದರು.

ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 2014 ರಿಂದ ಸಾರ್ವಜನಿಕವಾಗಿ ವಿರಳವಾಗಿ ಕಾಣಿಸಿಕೊಂಡಿದ್ದರು. ಪಾರ್ಶ್ವವಾಯು ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಪರವಾಗಿ  ಪುತ್ರ ಮೊಹಮ್ಮದ್ ಬಿನ್ ಜಯಾದ್ ಅವರು ಆಡಳಿತ ನಡೆಸುತ್ತಿದ್ದಾರೆ.

ಭಾರತ ಸರ್ಕಾರ ಸಹ  UAE ಅಧ್ಯಕ್ಷರ ನಿಧನಕ್ಕೆ ಸಂತಾಪ ಸೂಚಿಸಿದೆ. ದೇಶದ್ಯಂತ ಒಂದು ದಿನಗಳ ಕಾಲ  ಶೋಕಾಚರಣೆ ಘೋಷಿಸಲಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd