ಉದಯಯಪುರ್ ಮರ್ಡರ್ – ಸೆಕ್ಷನ್ 144 ಜಾರಿ, ಇಂಟರ್ ನೆಟ್ ಸಂಪರ್ಕ ಬಂದ್
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ಬೆಂಬಲಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವರ ಶಿರಚ್ಛೇದ ನಡೆಸಿರುವ ಘಟನೆ ಬಳಿಕ ಧಗಧಗಿಸುತ್ತಿರುವ ಉದಯುಪುರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಹೇರಲಾಗಿದೆ. ಯಾವುದೇ ಅಹಿತಕರ ಘಟನೆ ಮುಂದಿನ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಕೂಡಾ ಬಂದ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುವ ಪೋಸ್ಟ್‌ಗಳ ಮೇಲೆಯೂ ನಿಗಾ ಇರಿಸಲಾಗಿದೆ. ಮುಂದಿನ 30 ದಿನಗಳ ಕಾಲ ರಾಜ್ಯದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಈಗಾಗಲೇ ರಾಜಸ್ಥಾನ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
ಮೃತ ಕನ್ಹಯ್ಯ ಲಾಲ್‌ಗೆ ಈ ಹಿಂದೆಯೇ ಜೀವಬೆದರಿಕೆ ಕರೆಗಳು ಬರುತ್ತಿದ್ದವು ಎಂಬ ಅಂಶ ಬಹಿರಂಗಗೊಂಡಿದೆ.
ನೂಪುರ್ ಶರ್ಮಾ ರನ್ನ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಕನ್ಹಯ್ಯ ಲಾಲ್‌ಗೆ ವಿರುದ್ಧ ಜೂ.೧೧ ರಂದು ಎಫ್‌ಐಆರ್ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿತ್ತು. ಜೂ.೧೫ರಂದು ಕನ್ಹಯ್ಯ ಜಾಮೀನಿನ ಮೇಲೆ ಹೊರಬಂದಿದ್ದು, ಅದಾದ ಬಳಿಕ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದವು ಎನ್ನಲಾಗಿದೆ.
ಈ ಬಗ್ಗೆ ಅವರು ಪೊಲೀಸರಿಗೂ ದೂರು ನೀಡಿದ್ದರು. ಬಳಿಕ ಈ ಬಗ್ಗೆ ಸ್ಥಳೀಯ ಠಾಣಾಧಿಕಾರಿ ದೂರುದಾರರು ಮತ್ತು ಎರಡೂ ಸಮುದಾಯದ ಕೆಲವರನ್ನು ಠಾಣೆಗೆ ಕರೆಸಿ ವಿಷಯ ಇತ್ಯರ್ಥಪಡಿಸಿದ್ದರು. ಇದೀಗ ಬೆದರಿಕೆ ಕರೆಗಳ ಬಗ್ಗೆ ಕನ್ಹಯ್ಯ ಲಾಲ್ ದೂರು ನೀಡಿದ್ದರೂ ಅದನ್ನು ಎಎಸ್‌ಐ ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಆರೋಪಿಸಲಾಗಿದೆ.








