ಯೋಗಿಗೆ ಚಪ್ಪಲಿಯಲ್ಲಿ ಹೊಡೆಯುವೆ ಎಂದಿದ್ದ ‘ಮಹಾ’ ಸಿಎಂ – ಉದ್ಧವ್ ವಿರುದ್ಧ ಕೇಸ್..!
ಮುಂಬೈ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ದೂರು ದಾಖಲಾಗಿದೆ. ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ ಬೆನ್ನಲ್ಲೇ ಬಿಜೆಪಿಯು ಉದ್ಧವ್ ಠಾಕ್ರೆ ವಿರುದ್ಧ ದೂರು ನೀಡಿದೆ. ಉದ್ಧವ್ ಠಾಕ್ರೆ, ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕಿ ರಶ್ಮಿ ಠಾಕ್ರೆ, ಯುವಾ ಸೇನಾ ಅಧ್ಯಕ್ಷ ವರುಣ್ ಸರ್ದೇಸಾಯಿ ಅವರ ವಿರುದ್ಧ ಬಿಜೆಪಿ ದೂರು ನೀಡಿದ್ದು, ಎಫ್ಐಆರ್ ದಾಖಲಿಸಬೇಕೆಂದು ಆಗ್ರಹಿಸಿದೆ.
ರಾಖಿಗೆ ನಾಯಿ ಕಡಿತ – ನಾಯಿಗೆ ಕಚ್ಚದೇ ಬಿಡಲ್ಲಾ ಅಂದ ಡ್ರಾಮಾ ಕ್ವೀನ್..!
ಮೂರು ದೂರುಗಳು ನಾಸಿಕ್ ನಲ್ಲಿ ದಾಖಲಾಗಿದೆ. 2018ರಲ್ಲಿ ಶಿವಾಜಿ ಫೋಟೋಗೆ ಚಪ್ಪಲಿ ಹಾಕಿಕೊಂಡು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಲಾರ್ಪಣೆ ಮಾಡಿದ್ದರು. ಈ ವಿಚಾರವನ್ನು ಉಲ್ಲೇಖಿಸಿ ಉದ್ಧವ್ ಠಾಕ್ರೆ ಶಿವಾಜಿಗೆ ಅವಮಾನಗೈದ ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಹೇಳಿದ್ದರು. 2018 ರಲ್ಲಿ ಉದ್ಧವ್ ಠಾಕ್ರೆ ಈ ಹೇಳಿಕೆ ನೀಡಿದ್ದು, ಆಗ ಠಾಕ್ರೆ ಇನ್ನೂ ಮುಖ್ಯಮಂತ್ರಿ ಆಗಿರಲಿಲ್ಲ.
ದೂರಿನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಬಿಜೆಪಿ, ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾತ್ರ ಅಲ್ಲ ಅವರು ಗೋರಖ್ ಪುರ ಪೀಠದ ಮುಖ್ಯಸ್ಥರಾಗಿದ್ದಾರೆ. ಈ ಹೇಳಿಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಅಷ್ಟೇ ಅಲ್ಲದೇ ಅವರು ಮುಖ್ಯಮಂತ್ರಿ ಆಗಿದ್ದು, ಸಾಂವಿಧಾನಿಕ ಹುದ್ದೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದೆ.
ಬುಧವಾರ ನಾರಾಯಣ ರಾಣೆ ಅವರ ವಿರುದ್ಧ ಸಾಮ್ನಾದಲ್ಲಿ ಸಂಪಾದಕೀಯ ಬರೆಯಲಾಗಿತ್ತು. ಈ ಸಂಪಾದಕೀಯದಲ್ಲಿ ರಾಣೆ ಅವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಸಾಮ್ನಾ ಸಂಪಾದಕಿ ಆಗಿರುವ ಉದ್ಧವ್ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ವಿರುದ್ಧ ದೂರು ದಾಖಲಾಗಿದೆ.