ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪಿಎಂ ಭೇಟಿ ಬಳಿಕ ಮಾತನಾಡಿದ ಅವರು, ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಅಧಿಕಾರ ವಹಿಸಿಕೊಂಡ ನಂತರ ಭೇಟಿಯಾಗಬೇಕಿತ್ತು. ಆಗ ದೆಹಲಿ ವಿಧಾನಸಭೆ ಚುನಾವಣೆ ಇದ್ದ ಹಿನ್ನೆಲೆಯಲ್ಲಿ ಸಾಧ್ಯವಾಗಲಿಲ್ಲ. ಹೀಗಾಗಿ ಈಗ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಆಡ್ವಾಣಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೂಡ ಭೇಟಿ ಮಾಡಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ
ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...








