ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಪಿಎಂ ಭೇಟಿ ಬಳಿಕ ಮಾತನಾಡಿದ ಅವರು, ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಅಧಿಕಾರ ವಹಿಸಿಕೊಂಡ ನಂತರ ಭೇಟಿಯಾಗಬೇಕಿತ್ತು. ಆಗ ದೆಹಲಿ ವಿಧಾನಸಭೆ ಚುನಾವಣೆ ಇದ್ದ ಹಿನ್ನೆಲೆಯಲ್ಲಿ ಸಾಧ್ಯವಾಗಲಿಲ್ಲ. ಹೀಗಾಗಿ ಈಗ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಆಡ್ವಾಣಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೂಡ ಭೇಟಿ ಮಾಡಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
ಇದು ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ, ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ...








