ನವದೆಹಲಿ: ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯ ಜನ್ ಪಥ್ ನಲ್ಲಿರುವ ನಿವಾಸದಲ್ಲಿ ಸೋನಿಯಾ ಅವರನ್ನು ಠಾಕ್ರೆ ಭೇಟಿ ಮಾಡಿದ್ದು, ಅರ್ಧ ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಹಾರಾಷ್ಟ್ರದ ಪ್ರಸಕ್ತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಹಾಗೂ ಎನ್ ಆರ್ ಸಿ ಮತ್ತು ಸಿಎಎಗಳ ವಿರುದ್ಧ ಹೋರಾಟದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.








