Udupi | ಹಿಜಾಬ್ ವಿವಾದದ ಹಿಂದೆ ವಿದ್ಯಾರ್ಥಿನಿಯರ ತಪ್ಪಿಲ್ಲ udupi-minister-r-ashok-reaction-about-hijab saaksha tv
ಉಡುಪಿ : ಹಿಜಾಬ್ ವಿವಾದದ ಹಿಂದೆ ಐಸಿಸ್, ಕೆಎಫ್ ಡಿ ಮತ್ತಿತರರ ಸಂಘಟನೆಗಳ ಕೈವಾಡ ಇದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಆರೋಪಿಸಿದ್ದಾರೆ.
ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು. ಜಿಲ್ಲೆಯಲ್ಲಿ ಆರಂಭವಾದ ವಿವಾದ ದೇಶದಾದ್ಯಂತ ಹರಡಿದೆ.
ಇದು ವಿದ್ಯಾರ್ಥಿಗಳು ಮಾಡಲು ಸಾಧ್ಯವಿಲ್ಲ. ಇದರ ಹಿಂದೆ ಐಸಿಎಸ್. ಕೆಎಫ್ ಡಿ ಮತ್ತಿತರರ ಸಂಘಟನೆಗಳ ಕೈವಾಡ ಇದೆ ಎಂದು ದೂರಿದರು.
ಇನ್ನು ಮಕ್ಕಳು ಶಾಲೆಗೆ ವಿದ್ಯಾಭ್ಯಾಸಕ್ಕಾಗಿ ಹೋಗಬೇಕೆ ಹೊರತು ಧರ್ಮ ಪ್ರಚಾರಕ್ಕಾಗಿ ಅಲ್ಲ.
ಇದನ್ನ ಎಲ್ಲಾ ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು.
ನಿಮ್ಮ ನಿಮ್ಮ ಮನೆಯಲ್ಲಿ ನೀವು ಏನು ಬೇಕಾದರೂ ಮಾಡಿಕೊಳ್ಳಿ. ಶಾಲಾ- ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಮಾತ್ರ ಬನ್ನಿ ಎಂದು ಸಚಿವರು ಹೇಳಿದರು.









