Udupi : ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ – ರಾಜನಾಥ್ ಸಿಂಗ್
ಉಡುಪಿಯ ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿದರು..
ಬಳಿಕ ಮಾತನಾಡಿದ ಅವರು ಕಾಲ ಹೋಗಿ ಆಯ್ತು.. ಈಗ ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ ಎಂದು ಎಚ್ಚರಿಕೆ ನೀಡಿದ್ದಾರೆ..
ಅಲ್ಲದೇ ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ಜಗಳ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ಮುಖಮೂತಿ ನೋಡೋದಿಲ್ಲ ಎಂದಿದ್ದಾರೆ..
ಅಲ್ಲದೇ ಇನ್ನೂ ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ. ಭಾರತ 2047ಕ್ಕೆ ಪ್ರಪಂಚದ ಮೊದಲ ಸ್ಥಾನದಲ್ಲಿರಲಿದೆ. ದೇಶವನ್ನು ಐದು ಟ್ರಿಲಿಯನ್ ಆರ್ಥಿಕ ರಾಷ್ಟ್ರ ಮಾಡುವುದು ಪ್ರಧಾನಿ ಮೋದಿ ಕನಸು. ದೇಶದ ಯುವಜನಾಂಗ ಇದಕ್ಕೆ ಕೊಡುಗೆ ನೀಡುತ್ತಿದ್ದೇವೆ. ಗ್ಲೋಬಲ್ ಸಿಟಿಜನ್ ನಿರ್ಮಿಸಲು ಎನ್‌ಇಪಿ ಜಾರಿಗೆ ತಂದಿದ್ದೇವೆ ಎಂದಿದ್ದಾರೆ..








