ಉಡುಪಿಯಲ್ಲಿ ತೌಕ್ತೆ ಚಂಡಮಾರುತದ ಅಬ್ಬರ – ಆರೆಂಜ್ ಅಲರ್ಟ್ ಘೋಷಣೆ
ಉಡುಪಿ : ದೇಶದ ಮಲೆನಾಡು , ಕರಾವಳಿ ಭಾಗಗಳಲ್ಲಿ ತೌಕ್ತೆ ಚಂಡಮಾರುತದ ಆತಂಕ ಶುರುವಾಗಿದೆ. ಕರಾವಳಿ , ಮಲೆನಾಡಿನ ಭಾಗಗಗಳಲ್ಲಿ ಭಾರೀ ಮಳೆಯಾಗ್ತಿದ್ದು, ಜನ ಹೈರಾಣಾಗಿದ್ಧಾರೆ. ಈ ನಡುವೆ ಉಡುಪಿಯಲ್ಲಿ ನಿರಂತರ ಮಳೆಯಾಗ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಮೀನುಗಾರರಿಗೆ ಕಡಲಿಗಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಮನೆ ಮುಳುಗಡೆ ಯಾಗುವ ಆತಂಕ ವಿದ್ದರೆ ತಿಳಿಸುವಂತೆ ಜಿಲ್ಲಾಧಿಕಾರಿ ಜಗದೀಶ್ ಮನವಿ ಮಾಡಿದ್ದಾರೆ. ಅಲ್ಲದೇ ಜನರನ್ನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಸೂಚಿಸಲಾಗಿದೆ.
ಈಗಾಗಲೇ ತೌಕ್ತೆ ಚಂಡಮಾರುತಕ್ಕೆ 40ಮನೆಗಳು, 5ಮೀನುಗಾರಿಕಾ ಶೆಡ್ ಹಾನಿಯಾಗಿದ್ದು, ಸಾವಿರಾರು ತೆಂಗಿನ ಮರಗಳು ಸಮುದ್ರಪಾಲಾಗಿದೆ. 75 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗದೆ. ಸುಸಜ್ಜಿತ ಪುನರ್ವಸತಿ ಕೇಂದ್ರ ಸಿದ್ದವಾಗಿವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








