ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಉಡುಪಿ – ಮಿಷನ್ ಆಸ್ಪತ್ರೆಯ ಎಡವಟ್ಟಿಗೆ  ಮಹಿಳೆಯ ಸಾವು -ವೈದ್ಯರ ನಿರ್ಲಕ್ಷ್ಯಕ್ಕೆ ಭುಗಿಲೆದ್ದ ಆಕ್ರೋಶ

admin by admin
August 23, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Share on FacebookShare on TwitterShare on WhatsappShare on Telegram

ಉಡುಪಿ – ಮಿಷನ್ ಆಸ್ಪತ್ರೆಯ ಎಡವಟ್ಟಿಗೆ  ಮಹಿಳೆಯ ಸಾವು -ವೈದ್ಯರ ನಿರ್ಲಕ್ಷ್ಯಕ್ಕೆ ಭುಗಿಲೆದ್ದ ಆಕ್ರೋಶ

ಉಡುಪಿ, ಅಗಸ್ಟ್ 23: ಖಾಸಗಿ ಆಸ್ಪತ್ರೆಯಲ್ಲಿ ತಲೆ ನೋವು ಎಂದು ಚಿಕಿತ್ಸೆ ಪಡೆದ ವಿವಾಹಿತ ಮಹಿಳೆಯೊಬ್ಬರು ಔಷಧಿ ಪಡೆದ ಒಂದು ಗಂಟೆಯಲ್ಲಿ ಮೃತಪಟ್ಟ ಘಟನೆ ಉಡುಪಿಯ ಇಂದಿರಾನಗರದಲ್ಲಿ ವರದಿಯಾಗಿದೆ. ಉಡುಪಿ ಜಿಲ್ಲೆಯ ಇಂದಿರಾನಗರ, ಕುಕ್ಕಿಕಟ್ಟೆ ನಿವಾಸಿ ರಕ್ಷಾ(26) ಅವರು ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಬಿಜೆಪಿ ನಗರ ಯುವ ಮೋರ್ಚ ಉಪಾಧ್ಯಕ್ಷ ಶಿವ ಪ್ರಸಾದ್ ಅವರ ಪತ್ನಿ.

Related posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 4, 2026
2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026


ಕಳೆದ ಕೆಲವು ದಿನಗಳಿಂದ ಅವರು ಮೈಗ್ರೈ ನ್ ತಲೆನೋವಿನಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಈ ಹಿಂದೆ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆದಿದ್ದರೂ ಕೂಡ ಕಡಿಮೆಯಾಗದ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಬೆಳಗ್ಗೆ 6 ಗಂಟೆಗೆ ಸಮೀಪದ ಮಿಷನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಅಲ್ಲಿ ಇಂಜೆಕ್ಷನ್ ಮತ್ತು ಔಷಧಿ ಪಡೆದ ಬಳಿಕ ಅವರು ಚೇತರಿಸಿಕೊಂಡಿದ್ದು, ನಂತರ ಮನೆಗೆ ತೆರಳಿದ್ದರು.
ಮನೆಗೆ‌ ಮರಳಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದ ಅವರನ್ನು ಬೆಳಗ್ಗೆ ಸುಮಾರು 8:45 ರ ವೇಳೆಯಲ್ಲಿ ಎಬ್ಬಿಸಲು ನೋಡಿದಾಗ, ಬಾಯಲ್ಲಿ ನೊರೆ ಮತ್ತು ಯಾವುದೇ ಸ್ಪಂದನೆ ಇಲ್ಲದ ಸ್ಥಿತಿಯಲ್ಲಿ ಕಾಣಿಸಿಕೊಂಡರು. ಕೂಡಲೇ ಅವರನ್ನು ಈ ಮೊದಲು ಚಿಕಿತ್ಸೆ ನೀಡಿದ  ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆಗ ಅಲ್ಲಿದ್ದ ವೈದ್ಯರು ಆಕೆಗೆ ಚಿಕಿತ್ಸೆ ನೀಡಿದ ವೈದ್ಯರನ್ನು ಈ ಬಗ್ಗೆ ವಿಚಾರಿಸುವಂತೆ ಅಸಡ್ಡೆ ತೋರಿಸಿದರು. ಬಳಿಕ ಬೇರೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ‌

ಮೃತಪಟ್ಟ ಬಳಿಕ ಅಲ್ಲಿ ನಡೆಸಿದ ರ್ಯಾಪಿಡ್ ಟೆಸ್ಟ್‌ನಲ್ಲಿ ಕೊರೊನಾ ನೆಗೆಟಿವ್ ಎಂಬ ವರದಿ ಬಂದಿದ್ದು, ನಂತರ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಈ ನಡುವೆ ಮಹಿಳೆಯ ಕುಟುಂಬದವರು ಚಿಕಿತ್ಸೆ ನೀಡಿದ ನಗರದ ಮಿಷನ್ ಆಸ್ಪತ್ರೆ ನಿರ್ಲ್ಯಕ್ಷದಿಂದಾಗಿ ರಕ್ಷಾ ಸಾವನ್ನಪ್ಪಿದ್ದಾಳೆ ಎಂದು ಕೇಸ್ ದಾಖಲಿಸಲು ನೋಡಿದಾಗ ಪ್ರಯೋಗಾಲಯದಿಂದ ಕೊರೋನಾ ಪರೀಕ್ಷಾ ವರದಿ ನಾಳೆ ಬರಲಿದ್ದು ಆ ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳುವ ಭರವಸೆ ನೀಡಲಾಯಿತು.
ಶನಿವಾರ ಮೃತಪಟ್ಟ ಮಹಿಳೆಗೆ ಪ್ರಯೋಗಾಲಯದಲ್ಲಿ ನಡೆಸಿದ ವರದಿಯಲ್ಲಿ ಪಾಸಿಟಿವ್ ಬಂದಿರುವುದಾಗಿ ಜಿಲ್ಲಾಸ್ಪತ್ರೆ ವೈದ್ಯರು ಹೇಳಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಹಿಳೆಯ ಪತಿ ಶಿವಪ್ರಸಾದ್ ಮತ್ತು ಊರಿನ ಸಾರ್ವಜನಿಕರು, ನಗರದ ಮಿಶನ್ ಆಸ್ಪತ್ರೆಯ ಇದೀಗ ನಿರ್ಲಕ್ಷ್ಯ ಮುಚ್ಚಿ ಹಾಕಲು ಆಸ್ಪತ್ರೆಗಳೆಲ್ಲ ಸೇರಿಕೊಂಡು ಲಾಬಿ ಮಾಡಿ ಕೋವಿಡ್ ಪಾಸಿಟಿವ್ ವರದಿ ನೀಡಿದ್ದಾರೆ ಎಂದು ಹೇಳಿದ್ದಾರೆ.


ಜಿಲ್ಲಾಸ್ಪತ್ರೆಯ ಶವಗಾರದ ಮುಂದೆ ಶನಿವಾರ ಕುಟುಂಬಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಕೊರೋನಾ ಪಾಸಿಟಿವ್ ವರದಿ ಬಂದಿದ್ದರೂ ಮೃತ ದೇಹವನ್ನು ತಮಗೆ ಒಪ್ಪಿಸುವಂತೆ ಪಟ್ಟು ಹಿಡಿದಿದ್ದಾರೆ.
ಖಾಸಗಿ ಆಸ್ಪತ್ರೆಯ ವೈದ್ಯರು ನೀಡಿದ ಇಂಜೆಕ್ಷನ್ ನಿಂದ ನನ್ನ ಪತ್ನಿ ಮೃತ ಪಟ್ಟಿದ್ದಾಳೆ. ವೈದ್ಯರ ನಿರ್ಲಕ್ಷವನ್ನು ಮುಚ್ಚಿಹಾಕಲು ಕೊರೋನಾ ಪಾಸಿಟಿವ್ ಎಂದು ಹೇಳಲಾಗುತ್ತಿದೆ. ಮೃತಪಟ್ಟ ಬಳಿಕ ನಡೆಸಿದ ರ್ಯಾಪಿಡ್ ಟೆಸ್ಟ್‌ನಲ್ಲಿ ಕೊರೋನಾ ನೆಗೆಟಿವ್ ಎಂದು ವರದಿ ಬಂದಿದ್ದು, ನಂತರ ಪ್ರಯೋಗಾಲಯದಲ್ಲಿ ನಡೆಸಿದ ವರದಿಯಲ್ಲಿ ಪಾಸಿಟಿವ್ ಬಂದಿರುವುದಾಗಿ ಜಿಲ್ಲಾಸ್ಪತ್ರೆ ವೈದ್ಯರು ಹೇಳುತ್ತಿದ್ದಾರೆ. ಝೆರಾಕ್ಸ್ ಪ್ರತಿಯನ್ನು ವರದಿ ಎಂದು ಹೇಳಿ ನೀಡಿದ್ದು, ಅದರಲ್ಲಿ ಯಾವುದೇ ವೈದ್ಯರ ಸಹಿ ಇಲ್ಲ ಎಂದು ಮಹಿಳೆಯ ಪತಿ ಶಿವಪ್ರಸಾದ್ ಆರೋಪಿಸಿದ್ದಾರೆ.


ಪ್ರತಿಭಟನೆಯ ನಡುವೆ ಜಿಲ್ಲಾಸ್ಪತ್ರೆಯವರು ವೈದ್ಯರ ಸಹಿ ಇರುವ ವರದಿಯನ್ನು ಮನೆಯವರಿಗೆ ಒಪ್ಪಿಸಿದ್ದು, ಜಿಲ್ಲಾಸ್ಪತ್ರೆಯ ವಿರುದ್ಧ ಸಂಶಯ ವ್ಯಕ್ತಪಡಿಸಿದ ಮೃತರ ಕುಟುಂಬದವರು ಸ್ಥಳೀಯರು ಕೊರೋನಾ ವರದಿ ನೀಡಿರುವ ಜಿಲ್ಲಾ ಸರ್ಜನ್ ಸ್ಥಳಕ್ಕೆ ಬಂದು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ್ದಾರೆ, ಈ ವರದಿಯನ್ನು ನಾವು ಒಪ್ಪುವುದಿಲ್ಲ. ಇದರಲ್ಲಿ ವೈದ್ಯರ ಷಡ್ಯಂತ್ರ ಅಡಗಿದೆ. ನಮಗೆ ಮೃತದೇಹವನ್ನು ಬಿಟ್ಟುಕೊಡಿ ಎಂದು ಒತ್ತಾಯಿಸಿದ್ದಾರೆ.

Tags: #doctorcoronavirusCOVID-19Doctor's NeglectHeadacheHealthHospitalLatestMangalorePrivate hospitalUdupiViralcoronavirus
ShareTweetSendShare
Join us on:

Related Posts

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 4, 2026
0

ದಿನ ಭವಿಷ್ಯ: 04-03-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಿತಾಂಶಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಬಹುದು ಆದರೆ ನಿಮ್ಮ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ....

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram